Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:8 - ಪರಿಶುದ್ದ ಬೈಬಲ್‌

8 ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನನ್ನ ದಂಡನಾಯಕರೆಲ್ಲ ಅರಸರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:8
11 ತಿಳಿವುಗಳ ಹೋಲಿಕೆ  

ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.


ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


“‘ನೀವು ನನ್ನ ಒಡೆಯನಾದ ಅರಸನೊಂದಿಗೆ ಯುದ್ಧಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಈ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ.


“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು. ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು