ಯೆಶಾಯ 11:11 - ಪರಿಶುದ್ದ ಬೈಬಲ್11 ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.