ಯೆಶಾಯ 11:13 - ಪರಿಶುದ್ದ ಬೈಬಲ್13 ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |