ಯೆಶಾಯ 11:15 - ಪರಿಶುದ್ದ ಬೈಬಲ್15 ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು. ಅಧ್ಯಾಯವನ್ನು ನೋಡಿ |