ಯೆಶಾಯ 11:4 - ಪರಿಶುದ್ದ ಬೈಬಲ್4-5 ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.