ಯೆಶಾಯ 11:6 - ಪರಿಶುದ್ದ ಬೈಬಲ್6 ಆ ಸಮಯದಲ್ಲಿ ತೋಳಗಳು ಕುರಿಮರಿಯೊಂದಿಗೆ ಸಮಾಧಾನದಿಂದ ಒಟ್ಟಾಗಿ ವಾಸಿಸುವವು. ಚಿರತೆಯು ಆಡಿನ ಮರಿಗಳೊಂದಿಗೆ ಮಲಗಿಕೊಳ್ಳುವದು. ಕರುಗಳು, ಪ್ರಾಯದ ಸಿಂಹಗಳು, ಹೋರಿಗಳು ಒಟ್ಟಾಗಿ ಸಮಾಧಾನದಿಂದ ಜೀವಿಸುವವು. ಒಂದು ಚಿಕ್ಕಮಗು ಅವುಗಳನ್ನು ನಡಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು. ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.