Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:8 - ಪರಿಶುದ್ದ ಬೈಬಲ್‌

8 ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು; ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊಲೆಕೂಸು ನಾಗರಹುತ್ತದ ಮೇಲೆ ಆಡುವದು; ಮೊಲೆಬಿಟ್ಟ ಮಗು ಹಾವಿನ ಬಿಲದ ಮೇಲೆ ಕೈಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:8
7 ತಿಳಿವುಗಳ ಹೋಲಿಕೆ  

ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು.


ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.


ಆದರೆ ಕೊನೆಯಲ್ಲಿ ಅದು ವಿಷದ ಹಲ್ಲುಳ್ಳ ಹಾವಿನಂತೆ ಕಚ್ಚುವುದು.


ದನಗಳೂ ಕರಡಿಗಳೂ ಜೊತೆಯಾಗಿರುವವು. ಅವುಗಳ ಮರಿಗಳೆಲ್ಲಾ ಒಂದಕ್ಕೊಂದು ಹಾನಿಮಾಡದೆ ಒಟ್ಟಾಗಿ ಮಲಗಿಕೊಳ್ಳುವವು. ಸಿಂಹಗಳು ದನಗಳಂತೆ ಹುಲ್ಲು ತಿನ್ನುವವು. ಹಾವುಗಳು ಸಹ ಜನರಿಗೆ ಹಾನಿ ಮಾಡುವದಿಲ್ಲ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.


ನೀನು ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವೆ; ಕಾಡುಮೃಗಗಳೂ ನಿನ್ನೊಂದಿಗೆ ಸಮಾಧಾನದಿಂದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು