ಯೆಶಾಯ 11:9 - ಪರಿಶುದ್ದ ಬೈಬಲ್9 ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.