ಯೆಶಾಯ 12:6 - ಪರಿಶುದ್ದ ಬೈಬಲ್6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.” ಅಧ್ಯಾಯವನ್ನು ನೋಡಿ |
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.
ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.