ಯೆಶಾಯ 13:1 - ಪರಿಶುದ್ದ ಬೈಬಲ್1 ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ: ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)