12 ಬಂಗಾರವು ಯಾವ ರೀತಿಯಲ್ಲಿ ಅಪರೂಪವಾಗಿ ದೊರಕುವದೋ, ಅದೇ ಪ್ರಕಾರ ದೇಶದಲ್ಲಿ ಬಹು ಸ್ವಲ್ಪವೇ ಜನರು ಉಳಿಯುವದರಿಂದ ಅವರು ನೋಡಸಿಗುವದೇ ಅಪರೂಪ. ಅಂಥವರು ಚೊಕ್ಕಬಂಗಾರಕ್ಕಿಂತಲೂ ಬೆಲೆಬಾಳುವರು.
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.
ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.