Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:15 - ಪರಿಶುದ್ದ ಬೈಬಲ್‌

15 ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಿಕ್ಕಿಸಿಕ್ಕಿದವರೆಲ್ಲಾ ಇರಿಯಲ್ಪಡುವರು, ಅಟ್ಟಿ ಹಿಡಿಯಲ್ಪಟ್ಟ ಸಕಲರೂ ಕತ್ತಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:15
8 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.


ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.


ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು