Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:18 - ಪರಿಶುದ್ದ ಬೈಬಲ್‌

18 ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆತೋರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು; ಇವರು ಗರ್ಭಫಲವನ್ನು ಕನಿಕರಿಸರು, ಇವರ ಕಣ್ಣು ಮಕ್ಕಳನ್ನೂ ಕರುಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:18
18 ತಿಳಿವುಗಳ ಹೋಲಿಕೆ  

ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಅವರ ಮನೆಯಲ್ಲಿರುವ ಎಲ್ಲಾ ವಸ್ತುಗಳನ್ನು ಕಿತ್ತುಕೊಳ್ಳುವರು; ಅವರ ಹೆಂಡತಿಯರನ್ನು ಬಲಾತ್ಕಾರದಿಂದ ಸಂಭೋಗಿಸುವರು; ಅವರ ಮಕ್ಕಳನ್ನು ಜನರ ಕಣ್ಣೆದುರಿನಲ್ಲಿಯೇ ಹೊಡೆದು ಸಾಯಿಸುವರು.


ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.


ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.


ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


ಅವರ ಬತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ.


ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ:


ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.


ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.


“ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು