Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:20 - ಪರಿಶುದ್ದ ಬೈಬಲ್‌

20 ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದು ಎಂದಿಗೂ ನಿವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು; ಯಾವ ಅರಬಿಯನೂ ಗುಡಾರಹಾಕನು; ಕುರುಬರು ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:20
20 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.


ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.


ಉತ್ತರದ ಒಂದು ಜನಾಂಗವು ಬಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಬಾಬಿಲೋನನ್ನು ಒಂದು ಬರಿದಾದ ಮರುಭೂಮಿಯನ್ನಾಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”


ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”


ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹಧ್ವನಿಯೂ ಕೇಳದಿರಲಿ.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು