Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:21 - ಪರಿಶುದ್ದ ಬೈಬಲ್‌

21 ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದು ಕಾಡುಮೃಗಗಳಿಗೆ ಹಕ್ಕೆಯಾಗುವದು, ಅಲ್ಲಿನ ಮನೆಗಳಲ್ಲಿ ಗೂಬೆಗಳು ತುಂಬಿಕೊಳ್ಳುವವು, ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:21
10 ತಿಳಿವುಗಳ ಹೋಲಿಕೆ  

ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”


ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.


ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.


ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.


ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ ಎಲ್ಲಾ ವಿಧವಾದ ಡೇಗೆ,


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು