Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:22 - ಪರಿಶುದ್ದ ಬೈಬಲ್‌

22 ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅರಮನೆಗಳಲ್ಲಿ ತೋಳಗಳೂ, ವಿಲಾಸಮಂದಿರಗಳಲ್ಲಿ ನರಿಗಳೂ ಎದುರುಬದುರಾಗಿ ಕೂಗುವವು; ಅದಕ್ಕೆ ಹೊತ್ತು ಸಮೀಪಿಸಿದೆ, ಇನ್ನು ದಿನ ಹೆಚ್ಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:22
19 ತಿಳಿವುಗಳ ಹೋಲಿಕೆ  

ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


“ಮೋವಾಬಿನ ಅಂತ್ಯ ಸಮೀಪಿಸುತ್ತಿದೆ. ಬೇಗನೆ ಮೋವಾಬನ್ನು ಧ್ವಂಸಗೊಳಿಸಲಾಗುವುದು.


ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. ಆದರೆ ನನ್ನ ಜನರಾದರೋ, ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ.


ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಕಾಡುಬೆಕ್ಕುಗಳು ಮತ್ತು ಕತ್ತೆಕಿರುಬಗಳು ಅಲ್ಲಿ ವಾಸಮಾಡುವವು. ಕಾಡುಹೋತಗಳು ತಮ್ಮ ಸ್ನೇಹಿತರನ್ನು ಕರೆಯುವವು. ರಾತ್ರಿಪ್ರಾಣಿಗಳು ಅಲ್ಲಿ ವಿಶ್ರಮಿಸಿಕೊಳ್ಳುವವು.


ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು