ಯೆಶಾಯ 13:5 - ಪರಿಶುದ್ದ ಬೈಬಲ್5 ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ, ಭೂವಿುಯನ್ನೆಲ್ಲಾ ಹಾಳುಮಾಡುವದಕ್ಕಾಗಿ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ. ಅಧ್ಯಾಯವನ್ನು ನೋಡಿ |
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”