ಯೆಶಾಯ 13:8 - ಪರಿಶುದ್ದ ಬೈಬಲ್8 ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಬೆಚ್ಚಿಬೀಳುವರು, ಯಾತನೆವೇದನೆಗಳು ಅವರನ್ನಾಕ್ರವಿುಸುವವು. ಹೆರುವ ಹೆಂಗಸಿನಂತೆ ಸಂಕಟಪಡುವರು; ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು, ಅವರ ಮುಖಗಳು [ತಲ್ಲಣದಿಂದ] ಬೆಂಕಿಬೆಂಕಿಯಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು. ಅಧ್ಯಾಯವನ್ನು ನೋಡಿ |
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.