ಯೆಶಾಯ 13:9 - ಪರಿಶುದ್ದ ಬೈಬಲ್9 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ಯೆಹೋವನ ದಿನವು ಬರುತ್ತಿದೆ; ಅದು ಭೂವಿುಯನ್ನು ಹಾಳುಮಾಡಿ ಪಾಪಿಗಳನ್ನು ನಿರ್ಮೂಲಪಡಿಸುವದಕ್ಕೆ [ಆತನ] ಕೋಪೋದ್ರೇಕದಿಂದಲೂ ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು. ಅಧ್ಯಾಯವನ್ನು ನೋಡಿ |
ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.