ಯೆಶಾಯ 14:14 - ಪರಿಶುದ್ದ ಬೈಬಲ್14 ನಾನು ಉನ್ನತ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸರಿಸಮಾನನಾಗುತ್ತೇನೆ” ಎಂದುಕೊಳ್ಳುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ‘ಏರುವೆ ಉನ್ನತ ಮೇಘಮಂಡಲದ ಮೇಲಕೆ, ಸರಿಸಮಾನನಾಗುವೆ ಉನ್ನತೋನ್ನತನಿಗೆ’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಉನ್ನತವಾದ ಮೇಘ ಮಂಡಲದ ಮೇಲೆ ಏರಿ, ಮಹೋನ್ನತರಿಗೆ ಸಮಾನನಾಗುವೆನು.” ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.