ಯೆಶಾಯ 14:15 - ಪರಿಶುದ್ದ ಬೈಬಲ್15 ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧಸ್ಥಳಗಳಿಗೆ, ತಳ್ಳಲ್ಪಡುತ್ತಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”