ಯೆಶಾಯ 14:17 - ಪರಿಶುದ್ದ ಬೈಬಲ್17 ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಲೋಕವನ್ನು ಕಾಡನ್ನಾಗಿ ಮಾಡಿ, ನಗರಗಳನ್ನು ಕೆಡವಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ?” ಎಂದುಕೊಳ್ಳುವರು. ಅಧ್ಯಾಯವನ್ನು ನೋಡಿ |
ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.