Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:19 - ಪರಿಶುದ್ದ ಬೈಬಲ್‌

19 ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ, ಖಡ್ಗ ತಿವಿದು ಕಲ್ಲುಗುಂಡಿಗೆ ಪಾಲಾದ ಹೆಣಗಳ ಹೊದಿಕೆಯಂತೆಯೂ, ಪರರ ತುಳಿತಕ್ಕೆ ಈಡಾಗಿ, ಸಮಾಧಿಯೊಳಗಿಂದ ಹೊರಗೆ ಬಿಸಾಡಿರುವ ಶವದ ಹಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:19
17 ತಿಳಿವುಗಳ ಹೋಲಿಕೆ  

ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.


ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು.


ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ


ನಿನ್ನ ಕುಟುಂಬದಲ್ಲಿ ಯಾರಾದರೂ ನಗರದಲ್ಲಿ ಸತ್ತರೆ, ಅವರನ್ನು ನಾಯಿಗಳು ತಿನ್ನುತ್ತವೆ. ಯಾರಾದರೂ ತೋಟಗಳಲ್ಲಿ ಸತ್ತರೆ, ಅವರನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ ಎನ್ನುತ್ತಾನೆ’” ಎಂದು ಹೇಳಿದನು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.


ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು. ಪ್ರತಿಯೊಬ್ಬ ಅರಸನಿಗೆ ಸ್ವಂತ ಸಮಾಧಿ ಇರುವದು.


ಅವರ ಹೆಣಗಳು ಹೊರಗೆ ಬಿಸಾಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು.


ಕಸ್ದೀಯರ ಪ್ರದೇಶದಲ್ಲಿಯೇ ಬಾಬಿಲೋನಿನ ಸೈನಿಕರನ್ನು ಕೊಲ್ಲಲಾಗುವುದು. ಬಾಬಿಲೋನಿನ ಬೀದಿಗಳಲ್ಲಿಯೇ ಅವರು ಗಾಯಗೊಳ್ಳುವರು.”


ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು