ಯೆಶಾಯ 14:21 - ಪರಿಶುದ್ದ ಬೈಬಲ್21 ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ. ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪಿತೃಗಳ ಅಧರ್ಮದ ನಿವಿುತ್ತ ಇವನ ಮಕ್ಕಳಿಗೂ ವಧ್ಯಸ್ಥಾನವನ್ನು ಸಿದ್ಧಮಾಡಿರಿ! ಅವರು ತಲೆಯೆತ್ತಿ ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ, ಅವರ ತಂದೆಗಳ ಅಪರಾಧದ ನಿಮಿತ್ತ, ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅಧ್ಯಾಯವನ್ನು ನೋಡಿ |