Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:24 - ಪರಿಶುದ್ದ ಬೈಬಲ್‌

24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:24
30 ತಿಳಿವುಗಳ ಹೋಲಿಕೆ  

ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


“ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.


ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.


ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.


ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.


ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ. ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.


ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಈಜಿಪ್ಟೇ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿನಗೆ ತಿಳಿಸಬೇಕು.


ಯೆಹೂದ ಪ್ರಾಂತ್ಯದವರೂ ಈಜಿಪ್ಟಿನಲ್ಲಿರುವವರೂ ಭಯಪಡಬೇಕಾಗಿದೆ. ಈಜಿಪ್ಟಿನಲ್ಲಿ ಯಾರೇ ಆಗಲಿ ಯೆಹೂದದ ಹೆಸರು ಕೇಳಿದಾಗ ಭಯಪಡುವರು. ಯಾಕೆಂದರೆ ಭಯಂಕರ ಘಟನೆಗಳು ಈಜಿಪ್ಟಿನಲ್ಲಿ ಸಂಭವಿಸುವಂತೆ ಸರ್ವಶಕ್ತನಾದ ಯೆಹೋವನು ಮಾಡುತ್ತಾನೆ.


ಯೆಹೋವನು ಹೇಳುವುದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.


ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


“ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು