Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:26 - ಪರಿಶುದ್ದ ಬೈಬಲ್‌

26 ಹೀಗೆ ಮಾಡಲು ನಾನೇ ಆಲೋಚಿಸಿದ್ದೇನೆ. ನನ್ನ ಯೋಜನೆಯಂತೆಯೇ ಘಟನೆಗಳು ಸಂಭವಿಸುತ್ತವೆ. ನನ್ನ ಭುಜಬಲದಿಂದ ಜನಾಂಗಗಳನ್ನು ಶಿಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:26
9 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು!


ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.


ಯೆಹೋವನು ತನ್ನ ಕೈಗಳನ್ನು ಈಜುವವನಂತೆ ಅಗಲವಾಗಿ ತೆರೆದು ಮನುಷ್ಯರು ಹೆಚ್ಚಳಪಡುವ ವಸ್ತುಗಳನ್ನೆಲ್ಲಾ ಬಾಚಿಕೊಳ್ಳುವನು. ಜನರು ತಯಾರಿಸಿದ ಅಂದವಾದ ವಸ್ತುಗಳನ್ನು ಒಟ್ಟುಗೂಡಿಸಿ ಬಿಸಾಡುವನು.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು