29 ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.
29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
29 “ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.
29 ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.
29 ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.
ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.
ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.
ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.
ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”
“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”
ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಪಟ್ಟಣಗಳ ಮೇಲೆಯೂ ಧಾಳಿ ಮಾಡಿದರು. ಬೇತ್ಷಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ನಾ ಮತ್ತು ಗಿಮ್ಜೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿಕೊಂಡರು. ಫಿಲಿಷ್ಟಿಯರು ಆ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು.
ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.
ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.
ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”
“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.
ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.
ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.
ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.
“ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.