ಯೆಶಾಯ 14:31 - ಪರಿಶುದ್ದ ಬೈಬಲ್31 ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕುಂದಿಹೋಗಿರಿ! ಬಡಗಲಿಂದ ಹೊಗೆಯು ಬರುತ್ತಿದೆ. ಆ ವ್ಯೂಹದಲ್ಲಿ ಹಿಂದು ಬೀಳುವವರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |