ಯೆಶಾಯ 14:32 - ಪರಿಶುದ್ದ ಬೈಬಲ್32 ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.” ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.
ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”