ಯೆಶಾಯ 14:6 - ಪರಿಶುದ್ದ ಬೈಬಲ್6 ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ಆ ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.