8 ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.