ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’”
ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.
“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.
ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.
ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.
ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”