ಯೆಶಾಯ 15:7 - ಪರಿಶುದ್ದ ಬೈಬಲ್7 ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎಂತಲೇ ವಿಲ್ಲೊ ಕಣಿವೆಯಾಚೆ ಹೊತ್ತು ಹೋಗುತಿಹರು, ತಾವು ಗಳಿಸಿದ ಆಸ್ತಿಯನ್ನು, ಕೂಡಿಸಿಟ್ಟ ಸ್ವತ್ತನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿ |
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”