Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 15:8 - ಪರಿಶುದ್ದ ಬೈಬಲ್‌

8 ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿವಿುನವರೆಗೂ ಬೆಯೇರ್ ಏಲೀವಿುನ ಪರ್ಯಂತವೂ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 15:8
7 ತಿಳಿವುಗಳ ಹೋಲಿಕೆ  

ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.


ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು.


ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.


ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು