Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:1 - ಪರಿಶುದ್ದ ಬೈಬಲ್‌

1 ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇಶವನ್ನಾಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಗಳನ್ನು ಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರಿಯ ಪರ್ವತಕ್ಕೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು ಸೆಲ ಬಂಡೆಯಿಂದ ಮರುಭೂಮಿಯ ಕಡೆಗೆ, ಚೀಯೋನ್ ಪುತ್ರಿಯರ ಪರ್ವತಕ್ಕೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:1
8 ತಿಳಿವುಗಳ ಹೋಲಿಕೆ  

ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.


ಮೇಷನು ಮೋವಾಬಿನ ರಾಜನಾಗಿದ್ದನು. ಮೇಷನು ಅನೇಕ ಕುರಿಗಳ ಒಡೆಯನಾಗಿದ್ದನು. ಮೇಷನು ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಇಸ್ರೇಲಿನ ರಾಜನಿಗೆ ಕೊಡುತ್ತಿದ್ದನು.


ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.


ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.


ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.


“ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಧಿಪತಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು