Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:10 - ಪರಿಶುದ್ದ ಬೈಬಲ್‌

10 ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹರ್ಷಾನಂದಗಳು ತೋಟಗಳಿಂದ ತೊಲಗಿವೆ, ದ್ರಾಕ್ಷೆಯ ತೋಟಗಳಲ್ಲಿ ಉತ್ಸಾಹಧ್ವನಿಯೂ ಉಲ್ಲಾಸದ ಆರ್ಭಟವೂ ಇರುವದಿಲ್ಲ, ತುಳಿಯುವವರು ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ, ಅವರ ಕೂಗನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:10
13 ತಿಳಿವುಗಳ ಹೋಲಿಕೆ  

ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.


ದ್ರಾಕ್ಷಿತೋಟಗಳಲ್ಲಿ ಜನರು ಯಾಕೆ ಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.


ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”


ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.


ಬಡವರು ಆಲೀವ್ ಎಣ್ಣೆಯ ಗಾಣವಾಡಿಸುವರು; ದಾಹದಿಂದಲೇ ದ್ರಾಕ್ಷಿಅಲೆಯಲ್ಲಿ ತುಳಿದು ರಸ ತೆಗೆಯುವರು.


ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ.


ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.


ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.


ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು