Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:12 - ಪರಿಶುದ್ದ ಬೈಬಲ್‌

12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:12
24 ತಿಳಿವುಗಳ ಹೋಲಿಕೆ  

ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.


ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪಹಾಕುವದನ್ನು ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಬಲಿ ಅರ್ಪಿಸುವದನ್ನು ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆಗ ಬಿಳಾಮನು ಬಾಲಾಕನೊಡನೆ ಕಿರ್ಯತ್‌ಹುಚೋತಿಗೆ ಹೋದನು.


ಮೋವಾಬ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.


ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.


“ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.


ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!


ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.


ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.


ಮೋವಾಬಿನ ವಿಷಯವಾಗಿ ಯೆಹೋವನು ಅನೇಕ ಸಾರಿ ಇವುಗಳನ್ನು ಮುಂತಿಳಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು