Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:3 - ಪರಿಶುದ್ದ ಬೈಬಲ್‌

3 ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಲೋಚನೆಹೇಳಿರಿ, ತೀರ್ಮಾನಿಸಿರಿ; ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾಗಿರಲಿ; ದೇಶ ಭ್ರಷ್ಟರನ್ನು ಮರೆಮಾಜಿರಿ, ಅಲೆಯುವವರನ್ನು ಬೈಲಿಗೆ ತರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಲೋಚಿಸಿ, ತೀರ್ಮಾನಿಸಿರಿ. ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳನ್ನು ರಾತ್ರಿಯಂತೆ ಮಾಡಿರಿ. ವಲಸಿಗರನ್ನು ಅಡಗಿಸಿರಿ. ಅಲೆಯುವವರನ್ನು ಬಯಲಿಗೆ ತರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:3
18 ತಿಳಿವುಗಳ ಹೋಲಿಕೆ  

ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.


“ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.


ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


“ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು