Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:4 - ಪರಿಶುದ್ದ ಬೈಬಲ್‌

4 ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಆ ಜನರನ್ನು ಬಲವಂತ ಮಾಡಲಾಯಿತು. ಆದ್ದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, ನಾಶನವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ, ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತುಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲಾತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಡಿ ಹಿಂಸಿಸುವವರು [ನಿಮ್ಮ] ದೇಶದಿಂದ ನಿರ್ಮೂಲರಾದರು, ಬಲಾತ್ಕಾರವು ತೀರಿತು, ತುಳಿದುಬಿಡುವವರು ಮುಗಿದುಹೋದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:4
22 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ: ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.


ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.


“ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.


ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.


“ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು.


ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.


ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿಕೊಂಡು ಹೋಗುವವರನ್ನು ಸಾಯಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ತಪ್ಪಿಸಿಕೊಂಡು ಹೋದವರನ್ನು ನೀನು ಸೆರೆಹಿಡಿದೆ. ನೀನು ಹಾಗೆ ಮಾಡಬಾರದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು