ಯೆಶಾಯ 16:7 - ಪರಿಶುದ್ದ ಬೈಬಲ್7 ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದಕಾರಣ ಮೋವಾಬಿನ ನಿವಿುತ್ತ ಮೋವಾಬೇ ಗೋಳಾಡುವದು; ಪ್ರತಿಯೊಬ್ಬನೂ ಪ್ರಲಾಪಿಸುವನು; ಮುರಿದು ಹೋದವರಾಗಿ ನೀವು ಕೀರ್ ಹರೆಷೆಥಿನ ದೀಪದ್ರಾಕ್ಷೆಯು ಹಾಳಾಯಿತಲ್ಲಾ ಎಂದು ನರಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು.