Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:13 - ಪರಿಶುದ್ದ ಬೈಬಲ್‌

13 ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:13
33 ತಿಳಿವುಗಳ ಹೋಲಿಕೆ  

ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.


ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.


ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.


ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.


ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.


ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.


ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.


ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.


ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದ್ದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ.


ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಸ್ತಮಾನವೂ ನಮ್ಮನ್ನು ಹರ್ಷಗೊಳಿಸುತ್ತವೆ.


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು