Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:3 - ಪರಿಶುದ್ದ ಬೈಬಲ್‌

3 ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು. ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಫ್ರಾಯೀವಿುಗೆ ರಕ್ಷಣೆಯಾಗಿರುವ ಕೋಟೆಯೂ ದಮಸ್ಕವು ನಡಿಸುವ ರಾಜ್ಯಾಧಿಕಾರವೂ ಇಲ್ಲವಾಗುವವು; ಅರಾಮ್ಯರಲ್ಲಿ ಉಳಿದವರಿಗೆ ಇಸ್ರಾಯೇಲ್ಯರ ಮಹಿಮೆಯ ಗತಿಯಾಗುವದು ಎಂಬದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:3
27 ತಿಳಿವುಗಳ ಹೋಲಿಕೆ  

“ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.


ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.


“ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.


ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.


“ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು