Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:6 - ಪರಿಶುದ್ದ ಬೈಬಲ್‌

6 “ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಎಣ್ಣೆಯ ಮರವನ್ನು ಬಡಿದ ಬಳಿಕ ಮೇಲಿನ ಕೊಂಬೆಯ ಕೊಟ್ಟಕೊನೆಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ರೆಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು, ನಿಂತಿರುವಂತೆ ಹಕ್ಕಲು ಅದರಲ್ಲಿ ಉಳಿದಿರುವದು ಎಂದು ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:6
16 ತಿಳಿವುಗಳ ಹೋಲಿಕೆ  

ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟುಬಿಡುವರು.


ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?


ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”


ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು