Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:3 - ಪರಿಶುದ್ದ ಬೈಬಲ್‌

3 ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:3
20 ತಿಳಿವುಗಳ ಹೋಲಿಕೆ  

ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ನೀವಾದರೋ ಧನ್ಯರು. ನಿಮಗೆ ಕಾಣುವ ಸಂಗತಿಗಳನ್ನೂ ನಿಮಗೆ ಹೇಳುವ ವಿಷಯಗಳನ್ನೂ ಅರ್ಥಮಾಡಿಕೊಳ್ಳಬಲ್ಲಿರಿ.


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರಗಳೇ ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.”


ದೇಶವೇ, ದೇಶವೇ, ಯೆಹೂದದ ದೇಶವೇ, ಯೆಹೋವನ ಸಂದೇಶವನ್ನು ಕೇಳು.


“ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.


“ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.


“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು