ಯೆಶಾಯ 18:6 - ಪರಿಶುದ್ದ ಬೈಬಲ್6 ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕಡಿಯಲ್ಪಟ್ಟವರ ಶವಗಳೆಲ್ಲಾ ಬೆಟ್ಟದ ಹದ್ದುಗಳಿಗೂ ಕಾಡುಮೃಗಗಳಿಗೂ ಪಾಲಾಗಿ ಬಿದ್ದಿರುವವು, ಬೇಸಿಗೆಯಲ್ಲಿ ಹದ್ದುಗಳಿಗೂ ಹಿಮಗಾಲದಲ್ಲಿ ಕಾಡುಮೃಗಗಳಿಗೂ ಜೀವನವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು. ಅಧ್ಯಾಯವನ್ನು ನೋಡಿ |
ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.