Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:7 - ಪರಿಶುದ್ದ ಬೈಬಲ್‌

7 ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:7
17 ತಿಳಿವುಗಳ ಹೋಲಿಕೆ  

ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


ನೀವು ದೇಶದ ಅಧಿಪತಿಗೆ ಕಾಣಿಕೆಗಳನ್ನು ಕಳುಹಿಸಬೇಕು. ನೀವು ಸೇಲದ ಕುರಿಮರಿಯನ್ನು ಮರುಭೂಮಿಯ ಮೂಲಕ ಚೀಯೋನ್ ಕುಮಾರ್ತೆಯ ಪರ್ವತಕ್ಕೆ ಕಳುಹಿಸಿಕೊಡಬೇಕು.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.


ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು.


ಭೂರಾಜರುಗಳೇ, ದೇವರಿಗೆ ಗಾಯನ ಮಾಡಿರಿ! ನಮ್ಮ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು