Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:11 - ಪರಿಶುದ್ದ ಬೈಬಲ್‌

11 ಚೋಯನಿನ ನಗರದ ಪ್ರಮುಖರು ಮೂರ್ಖರಾಗಿದ್ದಾರೆ. ಫರೋಹನ “ಜ್ಞಾನಿಗಳಾದ ಸಲಹೆಗಾರರು” ತಪ್ಪು ಸಲಹೆ ಕೊಡುತ್ತಾರೆ. ಅವರು ತಾವೇ ಬುದ್ಧಿವಂತರೆಂದೂ ರಾಜವಂಶದವರೆಂದೂ ಹೇಳಿಕೊಳ್ಳುವರು. ಆದರೆ ತಾವು ನೆನಸುವಷ್ಟರ ಮಟ್ಟಿಗೆ ಅವರು ಬುದ್ಧಿವಂತರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:11
31 ತಿಳಿವುಗಳ ಹೋಲಿಕೆ  

ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು.


ನಿಮ್ಮ ಅಧಿಕಾರಿಗಳು ಚೋವನಿಗೆ ಹೋಗಿದ್ದಾರೆ, ನಿಮ್ಮ ರಾಯಭಾರಿಗಳು ಹಾನೇಸಿಗೆ ಹೋಗಿದ್ದಾರೆ.


ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು.


ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.


ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು.


ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.


ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಚೋಯನಿನ ಅಧಿಪತಿಗಳು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದ್ದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು.


ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”


ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.


ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.


ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.


‘ಈಜಿಪ್ಟಿನ ರಾಜನಾದ ಫರೋಹನು ಕೇವಲ ಒಂದು ಪೊಳ್ಳು ಧ್ವನಿ. ಅವನ ವೈಭವದ ದಿನಗಳು ಮುಗಿದವು’” ಎಂದು ಆ ಸೈನಿಕರು ತಮ್ಮ ಜನ್ಮಭೂಮಿಯಲ್ಲಿ ಹೇಳುವರು.


ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.


ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ ನಿನ್ನನ್ನು ನಿನ್ನ ದೇಶದಿಂದ ಹೊರಗಟ್ಟುವರು. ನಿನ್ನೊಡನೆ ಸಮಾಧಾನದಲ್ಲಿದ್ದ ಜನರು ನಿನ್ನನ್ನು ಮೋಸಪಡಿಸಿ ಸೋಲಿಸುವರು. ನಿನ್ನೊಂದಿಗೆ ಯುದ್ಧದಲ್ಲಿ ಹೋರಾಡಿದವನು ನಿನ್ನನ್ನು ಉರುಲಿನಲ್ಲಿ ಸಿಕ್ಕಿಸುವನು. ‘ಆದರೆ ಅದು ಅವನಿಗೆ ತಿಳಿಯುವುದೇ ಇಲ್ಲ’” ಎಂದು ಅನ್ನುವರು.


ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು’” ಅಂದನು.


ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.


ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು.


ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು