Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:12 - ಪರಿಶುದ್ದ ಬೈಬಲ್‌

12 ಈಜಿಪ್ಟೇ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿನಗೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿನ ಅರಸನೇ, ನಿನ್ನ ವಿದ್ವಾಂಸರೆಲ್ಲಿ? ಅವರೇ ನಿನಗೆ ತಿಳುವಳಿಕೆ ಕೊಡಲಿ. ಈಜಿಪ್ಟಿನ ವಿರೋಧವಾಗಿ ಸೇನಾಧೀಶ್ವರ ಸರ್ವೇಶ್ವರ ಯೋಚಿಸಿರುವುದನ್ನು ಅವರೇ ನಿನಗೆ ತಿಳಿಯಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ನಿನಗೆ ತಿಳಿಯ ಹೇಳಲಿ, ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅರಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:12
13 ತಿಳಿವುಗಳ ಹೋಲಿಕೆ  

ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು.


ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.


ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.


ಯೆಹೋವನು ಹೇಳುವುದೇನೆಂದರೆ, “ಆ ದಿವಸದಲ್ಲಿ ಎದೋಮಿನಲ್ಲಿರುವ ಬುದ್ಧಿವಂತರನ್ನು ನಾಶಮಾಡುವೆನು. ಏಸಾವಿನ ಪರ್ವತದಲ್ಲಿರುವ ಜಾಣರನ್ನು ನಾನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು