ಯೆಶಾಯ 19:14 - ಪರಿಶುದ್ದ ಬೈಬಲ್14 ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |