Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:18 - ಪರಿಶುದ್ದ ಬೈಬಲ್‌

18 ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತದೇಶದಲ್ಲಿರುವವು; ಇವುಗಳಲ್ಲಿ ಒಂದರ ಹೆಸರು ನಾಶಪುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:18
15 ತಿಳಿವುಗಳ ಹೋಲಿಕೆ  

ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.


ಜಲಪ್ರಳಯದ ನಂತರ ಇಡೀ ಪ್ರಪಂಚದ ಜನರು ಒಂದೇ ಭಾಷೆಯನ್ನು ಮಾತಾಡುತ್ತಿದ್ದರು. ಎಲ್ಲಾ ಜನರು ಒಂದೇ ಭಾಷೆಯ ಪದಗಳನ್ನು ಬಳಸುತ್ತಿದ್ದರು.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು